Webdunia - Bharat's app for daily news and videos

Install App

ಬ್ಯಾಂಕಿಂಗ್ ಶೇರುಗಳ ಖರೀದಿಗೆ ಹೂಡಿಕೆದಾರರ ಆಸಕ್ತಿ: ಸೂಚ್ಯಂಕ ಚೇತರಿಕೆ

Webdunia
ಗುರುವಾರ, 18 ಆಗಸ್ಟ್ 2016 (13:33 IST)
ಏಷ್ಯಾ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆ ಬ್ಯಾಂಕಿಂಗ್ ಶೇರುಗಳ ಖರೀದಿಗೆ ಹೂಡಿಕೆದಾರರು ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 165 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 147.03 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 28,170.83 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 46.45 ಪಾಯಿಂಟ್‌ಗಳ ಕುಸಿತ ಕಂಡು 8,670.50 ಅಂಕಗಳಿಗೆ ತಲುಪಿದೆ.
 
ಕೆನರಾ ಬ್ಯಾಂಕ್, ಎಸ್‌ಬಿಐ, ಆಂಧ್ರ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಮತ್ತು ಪಿಎನ್‌ಬಿ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಏಷ್ಯಾದ ಇತರ ಮಾರುಕಟ್ಟೆಗಳಾದ ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.51 ರಷ್ಟು ಏರಿಕೆ ಕಂಡಿದ್ದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.11 ರಷ್ಟು ಚೇತರಿಕೆ ಕಂಡಿದೆ. ಆದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.0.19 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.12 ರಷ್ಟು ಚೇತರಿಕೆ ಕಂಡಿದೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments