ಶೇರುಪೇಟೆ ಸೂಚ್ಯಂಕ ಸತತ ಮೂರನೇ ದಿನವೂ ಕುಸಿತ ಕಂಡಿದೆ. ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 60 ಪಾಯಿಂಟ್‌ಗಳ ಕುಸಿತ ಕಂಡಿದೆ.
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 274.69 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 60.39 ಪಾಯಿಂಟ್‌ಗಳ ಕುಸಿತ ಕಂಡು 27,721.86 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 11.10 ಪಾಯಿಂಟ್‌ಗಳ ಕುಸಿತ ಕಂಡು 8,561.45 ಅಂಕಗಳಿಗೆ ತಲುಪಿದೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.2.24 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.33 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.04 ರಷ್ಟು ಏರಿಕೆಯಾಗಿದೆ.
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.29 ರಷ್ಟು ಇಳಿಕೆಯೊಂದಿಗೆ ಮುಕ್ತಾಯವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ