ವಾಹನೋದ್ಯಮ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120.41 ಪಾಯಿಂಟ್‌ಗಳ ಕುಸಿತ ಕಂಡು 27,902.66 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 34.90 ಪಾಯಿಂಟ್‌ಗಳ ಚೇತರಿಕೆ ಕಂಡು 8,607.45 ಅಂಕಗಳಿಗೆ ತಲುಪಿದೆ.
ರಿಲಯನ್ಸ್, ಹೀರೋ ಮೋಟಾರ್ ಕಾರ್ಪೋರೇಶನ್, ಐಸಿಐಸಿಐ ಬ್ಯಾಂಕ್, ಎಲ್‌ಆಂಡ್‌ಟಿ ಮತ್ತು ಆದಾನಿ ಪೋರ್ಟ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ಏತನ್ಮಧ್ಯೆ, ವಿಪ್ರೋ ಮತ್ತು ಟಿಸಿಎಸ್ ಸೇರಿದಂತೆ ಇತರ ಐಟಿ ಕ್ಷೇತ್ರಗಳ ಶೇರುಗಳ ವಹಿವಾಟಿನಲ್ಲಿ ಶೇ.2.33 ರಷ್ಟು ಕುಸಿತ ಕಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ