ಅಮೆರಿಕದ ರಿಸರ್ವ್ ಬ್ಯಾಂಕ್ ಬಡ್ಡಿ ದರಗಳ ಏರಿಕೆ ಘೋಷಿಸಿದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 70 ಪಾಯಿಂಟ್‌ಗಳ ಚೇತರಿಕೆಯೊಂದಿಗೆ ಮುಕ್ತಾಯಗೊಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 4.67 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 69.73 ಪಾಯಿಂಟ್‌ಗಳ ಏರಿಕೆ ಕಂಡು 28,059.94 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 17.70 ಪಾಯಿಂಟ್‌ಗಳ ಏರಿಕೆ ಕಂಡು 8,650.30 ಅಂಕಗಳಿಗೆ ತಲುಪಿದೆ.
ಇನ್ಫೋಸಿಸ್, ಎನ್‌ಟಿಪಿಸಿ, ಸನ್ ಫಾರ್ಮಾ, ಪಿಐಎಲ್, ಒಎನ್‌ಜಿಸಿ, ಡಾ,ರೆಡ್ಡಿ, ಎಚ್‌ಡಿಎಫ್‌ಸಿ ಬ್ಯಾಂಕ್, ಎಚ್‌ಡಿಎಫ್‌ಸಿ ಲಿಮಿಟೆಡ್, ಎಕ್ಸಿಸ್ ಬ್ಯಾಂಕ್, ವಿಪ್ರೋ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ಜಪಾನ್‌ನ ನಿಕೈ ಸೂಚ್ಯಂಕ ಶೇ.0.61 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.77 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಕೂಡಾ ಶೇ.0.12 ರಷ್ಟು ಇಳಿಕೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ