ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 109 ಪಾಯಿಂಟ್‌ಗಳ ಏರಿಕೆ ಕಂಡಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 41.85 ಪಾಯಿಂಟ್‌ಗಳ ಏರಿಕೆ ಕಂಡು 8,819.20 ಅಂಕಗಳಿಗೆ ತಲುಪಿದೆ.
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 560.76 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ ಮತ್ತೆ 109.16 ಪಾಯಿಂಟ್‌ಗಳ ಏರಿಕೆ ಕಂಡು 28,452.17 ಅಂಕಗಳಿಗೆ ತಲುಪಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್ ಮತ್ತು ಎಸ್‌ಬಿಐ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಶೇ,1.83 ರಷ್ಟು ಏರಿಕೆ ಕಂಡಿದೆ.
ಶೇರುಪೇಟೆಯ ವಹಿವಾಟಿನ ಮುಕ್ತಾಯಕ್ಕೆ ಎಲ್‌ಆಂಡ್‌ಟಿ, ಏಷ್ಯನ್ ಪೇಂಟ್, ಐಟಿಸಿ ಲಿಮಿಟೆಡ್, ಎಚ್‌ಡಿಎಫ್‌ಸಿ ಲಿಮಿಟೆಡ್, ಪವರ್ ಗ್ರಿಡ್ ಮತ್ತು ವಿಪ್ರೋ ಶೇರುಗಳು ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ