ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 118.63 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 576 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 118.63 ಪಾಯಿಂಟ್‌ಗಳ ಏರಿಕೆ ಕಂಡು 25,999.80 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 33.20 ಪಾಯಿಂಟ್‌ಗಳ ಏರಿಕೆ ಕಂಡು 7,968.10.ಅಂಕಗಳಿಗೆ ತಲುಪಿದೆ.
ಕಾರ್ಪೋರೇಟ್ ಕಂಪೆನಿಗಳ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಚೇತರಿಕೆ ಕಂಡಿದ್ದರಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.29 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.