ಬ್ಯಾಂಕ್ ಆಫ್ ಇಂಗ್ಲೆಂಡ್ ರೆಪೋ ದರ ಕಡಿತ ಮತ್ತು ಆರ್ಥಿಕ ನೀತಿ ಸರಳಿಕರಣ ಘೋಷಿಸುತ್ತಿದ್ದಂತೆ ದೇಶಿಯ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 364 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡಿದೆ.
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಮತ್ತು ತೈಲ ಹಾಗೂ ಅನಿಲ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಭಾರಿ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಹಿಂದಿನ ದಿನದ ತೊಳಲಾಟದ ವಹಿವಾಟಿನ ಮುಕ್ತಾಯಕ್ಕೆ 16.86 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 363.98 ಪಾಯಿಂಟ್‌ಗಳ ಏರಿಕೆ ಕಂಡು 28,078.35 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 132.05 ಪಾಯಿಂಟ್‌ಗಳ ಏರಿಕೆ ಕಂಡು 8,683.15 ಅಂಕಗಳಿಗೆ ತಲುಪಿದೆ.
ಹೀರೋ ಮೋಟಾರ್ ಕಾರ್ಪೋರೇಶನ್, ಬಜಾಜ್ ಅಟೋ ಚೇತರಿಕೆ ಕಂಡರೆ, ಸನ್‌ಫಾರ್ಮಾ ಮತ್ತು ಪವರ್ ಗ್ರಿಡ್ ವಹಿವಾಟಿನಲ್ಲಿ ಭಾರಿ ನಷ್ಟ ಅನುಭವಿಸಿದವು.
ಎಕ್ಸಿಸ್ ಬ್ಯಾಂಕ್, ಟಾಟಾ ಮೋಟಾರ್ಸ್, ಎಸ್‌ಬಿಐ, ಎಂಆಂಡ್‌ಎಂ, ಎಲ್‌ಆಂಡ್‌ಟಿ ಮತ್ತು ಆದಾನಿ ಪೋರ್ಟ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.