Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜುಲೈ 26 ಕಾರ್ಗಿಲ್ ಗೆದ್ದ ದಿನ: ಆಪರೇಶನ್ ವಿಜಯ್ ಹೇಗಿತ್ತು ಗೊತ್ತಾ?

ಜುಲೈ 26 ಕಾರ್ಗಿಲ್ ಗೆದ್ದ ದಿನ: ಆಪರೇಶನ್ ವಿಜಯ್ ಹೇಗಿತ್ತು ಗೊತ್ತಾ?
ಬೆಂಗಳೂರು , ಶುಕ್ರವಾರ, 24 ಜುಲೈ 2020 (21:28 IST)
ನವದೆಹಲಿ: ಭಾರತೀಯ ಸೈನಿಕರ ಪರಾಕ್ರಮಕ್ಕೆ ಥಂಡಾಹೊಡೆದ ಪಾಕಿಸ್ತಾನ ಸೇನೆಯನ್ನು ಭಾರತದ ಭೂಭಾಗದಿಂದ ಹೊರಗಟ್ಟಿದ ದಿನವೇ 1999 ಜುಲೈ 26. ಅದೇ ದಿನವನ್ನು ಕಾರ್ಗಿಲ್ ವಿಜಯೋತ್ಸವ ದಿನವೆಂದು ಆಚರಿಸಲಾಗುತ್ತದೆ.
ಭಾರತದ ಗಡಿ ರೇಖೆಯನ್ನು ದಾಟಿ ಕೆಲ ಪ್ರದೇಶಗಳನ್ನು ವಶಪಡಿಸಿಕೊಂಡ ಪಾಕಿಸ್ತಾನದ ಕೃತ್ಯದಿಂದ ಭಾರತ ಬೆಚ್ಚಿ ಬೀಳುವಂತಾಗಿತ್ತು. ಆದರೆ, ವೀರಯೋಧರನ್ನು ಹೊಂದಿದ ಭಾರತೀಯ ಸೇನೆ ಕೆಲವೇ ದಿನಗಳಲ್ಲಿ ತನ್ನ ಪರಾಕ್ರಮವನ್ನು ತೋರಿ, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿತು. ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.
 
ಪಾಕಿಸ್ತಾನದ ಸೇನೆ ಭಾರತ ದೇಶದ ಗಡಿಯೊಳಗೆ ನುಗ್ಗಿ ಕೆಲ ಪ್ರದೇಶಗಳನ್ನು ಅಕ್ರಮವಾಗಿ ವಶಪಡಿಸಿಕೊಂಡು ದುರ್ವರ್ತನೆ ತೋರಿತು. ಭಾರತೀಯ ಸೇನೆ ಕಾರ್ಗಿಲ್‌ನಲ್ಲಿ ಆಪರೇಶನ್ ವಿಜಯ್ ಹೆಸರಿನ ಕಾರ್ಯಾಚರಣೆ ನಡೆಸಿ, ಪಾಕ್ ವಶಪಡಿಸಿಕೊಂಡ ಎಲ್ಲಾ ಪ್ರದೇಶಗಳನ್ನು ಮರಳಿ ವಶಪಡಿಸಿಕೊಂಡಿತು. 
 
ಕಾರ್ಗಿಲ್ ಯುದ್ಧದಲ್ಲಿ ಭಾರತದ 600ಕ್ಕೂ ಅಧಿಕ ವೀರ ಸೈನಿಕರು ಹುತಾತ್ಮರಾಗಿ, 1200ಕ್ಕೂ ಹೆಚ್ಚು ಮಂದಿ ಅಂಗವಿಕಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡಿಕೊಳ್ಳುತ್ತಾ ಸೇನೆ ಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

1999ರ ಕಾರ್ಗಿಲ್ ಯುದ್ಧ ಯಾರಾದರೂ ಮರೆಯುವುದುಂಟೆ