ಇನ್ನು ತಮಿಳುನಾಡಿನಲ್ಲಿ ವಿಲಕ್ಷಣ ಬೆಳವಣಿಗೆಯೊಂದರಲ್ಲಿ, ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲು ಪ್ರಸ್ತುತ ಆಸ್ಟ್ರೇಲಿಯಾದಲ್ಲಿರುವ ಭಾರತದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಬಂಧಿಸಬೇಕೆಂದು ಜನರು #ArrestKohli ಹ್ಯಾಶ್‌ಟ್ಯಾಗ್ ಅನ್ನು ಟ್ರೆಂಡಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತನನ್ನು ಕೊಂದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ತಮಿಳುನಾಡಿನ ಪೊಲೀಸರು ಹೇಳಿದ ನಂತರ, ವಿಶ್ವದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಂಧಿಸುವಂತೆ ನೆಟಿಜನ್‌ಗಳು ಏಕೆ ಒತ್ತಾಯಿಸುತ್ತಿದ್ದಾರೆ...ಇನ್ನು ಆಶ್ಚರ್ಯ ಪಡುತ್ತಿರುವಾಗ ಕೊಹ್ಲಿ ಅರೆಸ್ಟ್ ಹ್ಯಾಶ್‌ಟ್ಯಾಗ್ ಅನೇಕರನ್ನು ದಿಗ್ಭ್ರಮೆಗೊಳಿಸಿದೆ. ಐಪಿಎಲ್‌ನಲ್ಲಿ ಮೃತ ವಿಘ್ನೇಶ್ ಮುಂಬೈ ಇಂಡಿಯನ್ಸ್ ಮತ್ತು ರೋಹಿತ್ ಶರ್ಮಾ ಅವರನ್ನು ಬೆಂಬಲಿಸಿದ್ದರೆ, ಕೊಲೆ ಆರೋಪಿ ಧರ್ಮರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಅದರ ಮಾಜಿ ನಾಯಕ ವಿರಾಟ್ ಕೊಹ್ಲಿಯ ಅಭಿಮಾನಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.