Webdunia - Bharat's app for daily news and videos

Install App

ಬಂಗಾರ ನಮ್ಮ ನೀರಜ್ ಚೋಪ್ರಾ: ಪಾವೊ ನೂರ್ಮಿ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಜ್ಯಾವೆಲ್ ಪಟು

Krishnaveni K
ಬುಧವಾರ, 19 ಜೂನ್ 2024 (11:09 IST)
ನವದೆಹಲಿ: ಭಾರತದ ಖ್ಯಾತ ಜ್ಯಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ತಾವು ಚಿನ್ನದ ಹುಡುಗ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರತಿಷ್ಠಿತ ಪಾವೊ ನೂರ್ಮಿ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಪುರುಷರ ಜ್ಯಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಹಣಾಹಣಿಯಲ್ಲಿ ಅಂತಿಮವಾಗಿ 85.97 ಮೀ. ದೂರ ಎಸೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ನೀರಜ್ ಗೆ ಅತಿಥೇಯ ಫಿನ್ ಲ್ಯಾಂಡ್ ದೇಶದ ಒಲಿವರ್ ಹೆಲ್ಯಾಂಡರ್ ರಿಂದ ತೀವ್ರ ಪೈಪೋಟಿ ಎದುರಾಗಿತ್ತು.

ದ್ವಿತೀಯ ಸುತ್ತಿನಲ್ಲಿ 83.96 ಮೀಟರ್ ದೂರ ಎಸೆದು ನೀರಜ್ ರನ್ನೇ ಹಿಂದಿಕ್ಕಿದ್ದರು. ಆದರೆ ಅಂತಿಮ ಸುತ್ತಿನಲ್ಲಿ ನೀರಜ್ ಅವರೇ ಮೇಲುಗೈ ಸಾಧಿಸಿದ್ದು ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. 2022 ರ ಪಾವೊ ನೂರ್ಮಿ ಗೇಮ್ಸ್ ನಲ್ಲಿ ನೀರಜ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಆದರೆ ಈ ಬಾರಿ ಚಿನ್ನವನ್ನೇ ಹೊಡೆದುಕೊಂಡಿದ್ದಾರೆ.

ಇದೀಗ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಗೆ ಸಿದ್ಧತೆ ನಡೆಸುತ್ತಿರುವ ನೀರಜ್ ಚೋಪ್ರಾ ಮತ್ತೊಮ್ಮೆ ಒಲಿಂಪಿಕ್ಸ್ ಚಿನ್ನ ಗೆಲ್ಲಲು ಈ ಗೇಮ್ಸ್ ಸ್ಪೂರ್ತಿಯಾಗಲಿದೆ. ಈ ಬಾರಿ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲೂ ಅವರು ಇದೇ ಪ್ರದರ್ಶನ ಕಾಯ್ದುಕೊಳ್ಳುವ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments