ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಓಟದ ರಾಣಿ ಪಿಟಿ ಉಷಾ ಕೇಂದ್ರ ಸರ್ಕಾರದ ಪ್ರತಿಷ್ಠಿತ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ವಿಜೇತರನ್ನು ಆರಿಸುವ ಸಮಿತಿಗೆ ಆಯ್ಕೆಯಾಗಿದ್ದಾರೆ.
12 ಮಂದಿ ಇರುವ ಸಮಿತಿಯಲ್ಲಿ ಸೆಹ್ವಾಗ್ ಮತ್ತು ಪಿಟಿ ಉಷಾ ಕೂಡಾ ಸದಸ್ಯರಾಗಿರುತ್ತಾರೆ. ಇತ್ತೀಚೆಗಷ್ಟೇ ಟೀಂ ಇಂಡಿಯಾ ಕೋಚ್ ಹುದ್ದೆ ಕೈ ತಪ್ಪಿದ ಸೆಹ್ವಾಗ್ ಗೆ ಈಗ ಪ್ರತಿಷ್ಠಿತ ಪ್ರಶಸ್ತಿ ವಿಜೇತರನ್ನು ಆರಿಸುವ ಜವಾಬ್ದಾರಿ ಸಿಕ್ಕಂತಾಗಿದೆ.
ಇನ್ನು, ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ವಿಜೇತರ ಆಯ್ಕೆ ಸಮಿತಿಯಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಮತ್ತು ಬ್ಯಾಡ್ಮಿಂಟನ್ ಪಟು ಪುಲ್ಲೇಲ ಗೋಪಿಚಂದ್ ಸದಸ್ಯರಾಗಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಸಿಕೆ ಠಕ್ಕರ್ ಈ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ. ಆಗಸ್ಟ್ 3 ರಂದು ಪ್ರಶಸ್ತಿ ವಿಜೇತರ ಹೆಸರು ಪ್ರಕಟಗೊಳ್ಳಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ