Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊಹ್ಲಿ ದಾಖಲೆ ಮುರಿದ ಸಿಕದಂರ್​​ ರಾಜಾ

ಕೊಹ್ಲಿ ದಾಖಲೆ ಮುರಿದ ಸಿಕದಂರ್​​ ರಾಜಾ
bangalore , ಭಾನುವಾರ, 23 ಅಕ್ಟೋಬರ್ 2022 (17:49 IST)
ಟಿ-20 ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಜಿಂಬಾಬ್ವೆ ಸ್ಟಾರ್ ಆಟಗಾರ ಸಿಕಂದರ್ ರಾಜಾ ಇದೀಗ ವಿಶೇಷ ದಾಖಲೆ ಬರೆದಿದ್ದಾರೆ. ಐರ್ಲೆಂಡ್ ವಿರುದ್ಧ ಕೇವಲ 23 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 40 ರನ್​ ಬಾರಿಸಿದ ಸಿಕಂದರ್ ಗೆಲುವಿನ ರುವಾರಿಯಾಗಿದ್ದರು. ಈ ಗೆಲುವಿನೊಂದಿಗೆ ಜಿಂಬಾಬ್ವೆ ತಂಡವು ಸೂಪರ್​-12 ಸುತ್ತಿಗೆ ಪ್ರವೇಶಿಸಿತು. ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನ ಫಲವಾಗಿ ಸಿಕಂದರ್​ ರಾಝ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆಯನ್ನು ಸಿಕಂದರ್ ರಾಝ ಸರಿಗಟ್ಟಿದ್ದಾರೆ. ಈ ಹಿಂದೆ ಒಂದೇ ವರ್ಷದಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ವಿಶ್ವ ದಾಖಲೆ ನಿರ್ಮಿಸಿದ್ದು ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ 2016 ರಲ್ಲಿ 6 ಬಾರಿ ಮ್ಯಾನ್ ಆಫ್​ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದರು. ಇದೀಗ 2022 ರಲ್ಲಿ 6 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಜಿಂಬಾಬ್ವೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಟಿ20 ವಿಶ್ವಕಪ್: ಮೊದಲ ಪಂದ್ಯದಲ್ಲೇ ಹೀನಾಯ ಸೋಲುಂಡ ಅತಿಥೇಯ ಆಸೀಸ್