Webdunia - Bharat's app for daily news and videos

Install App

ಟಿ20 ಪಂದ್ಯಕ್ಕೆ ಭಾರತದಲ್ಲಿ ಬರೋಬ್ಬರಿ ಬದಲಾವಣೆ!

Webdunia
ಭಾನುವಾರ, 21 ನವೆಂಬರ್ 2021 (09:34 IST)
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಎರಡು ಪಂದ್ಯ ಗೆದ್ದು ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ.
ಕೋಲ್ಕತ್ತಾದ ಇತಿಹಾಸ ಪ್ರಸಿದ್ಧ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ಅಂತಿಮ ಕದನ ನಡೆಯಲಿದ್ದು, ರೋಹಿತ್ ಶರ್ಮಾ ಪಡೆ ಕ್ಲೀನ್ ಸ್ವಿಪ್ ನತ್ತ ಚಿತ್ತ ನೆಟ್ಟಿದೆ. ಟಿ20 ವಿಶ್ವಕಪ್ನಿಂದ ಹೊರಬಿದ್ದ ಆಘಾತ ಮರೆಮಾಚಲು ಈ ಸರಣಿ ವೈಟ್ವಾಶ್ ಭಾರತಕ್ಕೆ ಕೊಂಚ ನೆಮ್ಮದಿ ತರಬಹುದು. ಇದರ ನಡುವೆ ಸರಣಿಯ ಅಂತಿಮ ಪಂದ್ಯವನ್ನಾದರೂ ಗೆದ್ದು ಮುಖಭಂಗ ತಪ್ಪಿಸಿಕೊಳ್ಳುವ ಪ್ರಯತ್ನ ನ್ಯೂಜಿಲೆಂಡ್‌ನ‌ದ್ದು. ಆಡಿದ ಎರಡೂ ಪಂದ್ಯಗಳಲ್ಲಿ ಭಾರತ ಅಧಿಕಾರಯುತವಾಗಿಯೇ ಕಿವೀಸ್ ಪಡೆಯನ್ನು ಮಣಿಸಿದೆ. ನ್ಯೂಜಿಲೆಂಡ್ ಆರಂಭದಲ್ಲಿ ಅಬ್ಬರಿಸಿದರೂ ಡೆತ್ ಓವರ್‌ಗಳಲ್ಲಿ ದಿಢೀರ್ ಕುಸಿತ ಕಂಡು ಹಿನ್ನಡೆ ಅನುಭವಿಸಿದೆ. ಭಾರತ ಈ ತಪ್ಪನ್ನು ಮಾಡದೆ ಅದಾಗಲೇ ಮುಂದಿನ ವರ್ಷದ ಟಿ20 ವಿಶ್ವಕಪ್ಗೆ ಸಿದ್ಧತೆ ನಡೆಸುತ್ತಿದೆ.
ರೋಹಿತ್ ಪಡೆಗೆ ಇದೊಂದು ಔಪಚಾರಿಕ ಪಂದ್ಯವಾದರೂ ಗೆಲುವು ಮಹತ್ವದ್ದಾಗಿದೆ. ಯಾಕಂದ್ರೆ ಇದು ರೋಹಿತ್ ಶರ್ಮಾ ಅವರಿಗೆ ನಾಯಕನಾಗಿ ಮೊದಲ ಸರಣಿ. ಜೊತೆಗೆ ಕೋಚ್ ರಾಹುಲ್ ದ್ರಾವಿಡ್ಗೂ ಇದು ಮೊದಲ ಸರಣಿ. ಹೀಗಾಗಿ ಕ್ಲೀನ್ ಸ್ವಿಪ್ ಮಾಡಿದರೆ ವಿಶೇಷ ಸಾಧನೆಯಾಗಲಿದೆ. ಕಳೆದ 2ನೇ ಟಿ20 ಪಂದ್ಯ ಮುಗಿದ ಬಳಿಕ ರೋಹಿತ್ 3ನೇ ಟಿ20 ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಮಾಡುವ ಸೂಚನೆ ನೀಡಿದ್ದರು. ಅದರಂತೆ ಪ್ರಮುಖವಾಗಿ ನಾಲ್ಕು ಬದಲಾವಣೆ ನಿರೀಕ್ಷಿಸಲಾಗಿದೆ.
ಹೌದು, ಟೀಮ್ ಇಂಡಿಯಾ ಇಂದಿನ ಪಂದ್ಯದ ಮೂಲಕ ತನ್ನ ಬೆಂಚ್ ಸ್ಟ್ರೆಂಥ್ ಬಗ್ಗೆ ತಿಳಿದುಕೊಳ್ಳುವ ಸಾಧ್ಯತೆಯು ಇದೆ. ಅನುಭವಿಗಳಿಗೆ ವಿಶ್ರಾಂತಿ ನೀಡಿ ಅವಕಾಶಕ್ಕಾಗಿ ಕಾಯುತ್ತಿರುವ ಆಟಗಾರರನ್ನು ಕಣಕ್ಕಿಳಿಸಬಹುದು. ಪ್ರಮುಖವಾಗಿ ಸತತವಾಗಿ ಕ್ರಿಕೆಟ್ ಆಡುತ್ತಿರುವ ಕೆಎಲ್ ರಾಹುಲ್, ರಿಷಭ್ ಪಂತ್ ಮತ್ತು ರವಿಚಂದ್ರನ್ ಅಶ್ವಿನ್ಗೆ ವಿಶ್ರಾಂತಿ ನೀಡುವ ಸಂಭವವಿದೆ. ಹೀಗಾದಲ್ಲಿ ಓಪನರ್ ಆಗಿ ರೋಹಿತ್ ಶರ್ಮಾ ಜೊತೆ ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments