ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧುಗೆ ಜನ್ಮದಿನದ ಸಂಭ್ರಮ. ತಮ್ಮ ಕುಟುಂಬದೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುಸರ್ಲಾ ವೆಂಕಟ ಸಿಂಧು (ಜನನ 5 ಜುಲೈ1995)ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ.ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ.
10 ಆಗಸ್ಟ್ 2013 ರಂದು ಇವರು ಚೀನಾದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1993 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ.
ಸೆಪ್ಟೆಂಬರ್ 21, 2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 2೦ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.