ಸಿಂಗಾಪುರ: ಭಾರತೀಯ ಮಹಿಳಾ ಹಾಕಿ ತಂಡ ಚೀನಾ ತಂಡವನ್ನು ಸೋಲಿಸಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ತೀವ್ರ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ದೀಪಿಕಾ ಠಾಕೂರ್ ಅಂತಿಮ ಕ್ಷಣದಲ್ಲಿ ಗೋಲು ಗಳಿಸುವ ಮೂಲಕ ತಂಡಕ್ಕೆ ಗೆಲುವು ಕೊಡಿಸಿದರು. 1-1 ರಿಂದ ಅಂಕ ಸಮವಾಗಿದ್ದಾಗ 60 ನೇ ನಿಮಿಷದಲ್ಲಿ ದೀಪಿಕಾ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಗಳಿಸಿದರು.
ದೀಪ್ ಗ್ರೇಸ್ ಎಕ್ಕಾ ಭಾರತದ ಪರ ಗೋಲು ಗಳಿಸಿದ ಇನ್ನೋರ್ವ ಆಟಗಾರ್ತಿ. ಚಾಂಪಿಯನ್ ಆದ ಮಹಿಳಾ ತಂಡಕ್ಕೆ ಶುಭಾಷಯಗಳ ಮಹಾಪೂರವೇ ಹರಿದು ಬಂದಿದೆ. ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡುಲ್ಕರ್, ವೀರೇಂದ್ರ ಸೆಹ್ವಾಗ್ ಮೊದಲಾದವರೂ ಟ್ವಿಟರ್ ಮೂಲಕ ಶುಭ ಕೊರಿದ್ದಾರೆ.
ಕಳೆದ ವಾರವಷ್ಟೇ ಪುರುಷರ ಹಾಕಿ ತಂಡ ಪಾಕಿಸ್ತಾನ ವಿರುದ್ಧ ಗೆದ್ದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಇದೀಗ ಮಹಿಳೆಯರೂ ಅದೇ ಸಾಧನೆ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ