ಟೋಕಿಯೋ: ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಜ್ವಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾಗೆ ಕೋಚಿಂಗ್ ಮಾಡಿದ್ದ ಕರ್ನಾಟಕ ಕಾಶೀನಾಥ್ ಗೆ ರಾಜ್ಯ ಸರ್ಕಾರ 10 ಲಕ್ಷ ರೂ. ಬಹುಮಾನ ಘೋಷಿಸಿದೆ.
ಬಹುಮಾನ ಘೋಷಿಸಿದ ಕ್ರೀಡಾ ಸಚಿವ ನಾರಾಯಣ ಗೌಡ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ನೀರಜ್ ಚೋಪ್ರಾಗೆ ತರಬೇತಿ ನೀಡಿದ್ದಕ್ಕಾಗಿ ಈ ಬಹುಮಾನ ನೀಡಲಾಗುತ್ತದೆ ಎಂದಿದ್ದಾರೆ.
ಜೊತೆಗೆ ಗಮನಾರ್ಹ ಪ್ರದರ್ಶನ ನೀಡಿದ ರಾಜ್ಯದ ಗಾಲ್ಫರ್ ಅದಿತಿ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾರನ್ನೂ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು ಎಂದು ಕ್ರೀಡಾ ಸಚಿವರು ಹೇಳಿದ್ದಾರೆ.