ಟೋಕಿಯೋ: ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಮೂರನೇ ಸುತ್ತಿನ ಪಂದ್ಯದಲ್ಲಿ ಗೆದ್ದ ಭಾರತದ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ಸಿಂಧು ಡೆನ್ಮಾರ್ಕ್ ನ ಮಿಯಾ ಬ್ಲಿಚ್ ಫ್ಲೆಡ್ತ್ ವಿರುದ್ಧ 21-15, 21-13 ಅಂತರದಿಂದ ಗೆಲುವು ಸಾಧಿಸಿದರು. ಇದರೊಂದಿಗೆ ಸಿಂಧು ನಾಕೌಟ್ ಹಂತಕ್ಕೇರಿದ್ದಾರೆ.
ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಯಾರನ್ನು ಎದುರಿಸುತ್ತಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಈ ಪಂದ್ಯ ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವುದು ಖಚಿತವಾಗಿದೆ.