Webdunia - Bharat's app for daily news and videos

Install App

ಎಂಟು ಗಂಟೆಗಳ ಅಂತರದಲ್ಲಿ ಮೂರು ಪೈಲ್ವಾನರನ್ನು ಬಗ್ಗುಬಡಿದು ಫೈನಲ್‌ಗೆ ಲಗ್ಗೆ ಹಾಕಿದ ವಿನೇಶ ಫೋಗಟ್‌

Sampriya
ಬುಧವಾರ, 7 ಆಗಸ್ಟ್ 2024 (02:08 IST)
Photo Courtesy X
ಪ್ಯಾರಿಸ್: ವಿನೇಶ ಪೋಗಟ್​ ಅವರು ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ ಫೈನಲ್‌ಗೆ ಲಗ್ಗೆ ಹಾಕಿದ್ದು, ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

 ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್​ ತಲುಪಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ. ಮಂಗಳವಾರ ನಡೆದ ಪ್ರಿ ಕ್ವಾರ್ಟರ್‌ ಫೈನಲ್‌, ಕ್ವಾರ್ಟರ್‌ ಫೈನಲ್‌ ಮತ್ತು ಸೆಮಿಫೈನಲ್‌ನಲ್ಲಿ ಗೆದ್ದು ಚಿನ್ನಕ್ಕೆ ಹತ್ತಿರವಾಗಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯುವ ತವಕದಲ್ಲಿದ್ದಾರೆ. ಬುಧವಾರ ರಾತ್ರಿ ಫೈನಲ್‌ನಲ್ಲಿ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಅಮೆರಿಕಾದ ಸೆರಾ ಅವರನ್ನು ಎದುರಿಸಲಿದ್ದಾರೆ.

ಪೋಗಟ್‌ ಅವರು ಸೆಮಿಫೈನಲ್​ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ವಿರುದ್ಧ ಭಾರತದ ವಿನೇಶಾ 5-0 ಅಂತರದಲ್ಲಿ ಸುಲಭ ಜಯಗಳಿಸಿದರು. ಈ
ಈ ಗೆಲುವಿನೊಂದಿಗೆ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಫೈನಲ್‌ಗೆ ಅರ್ಹತೆ ಪಡೆದ ಭಾರತದ ಎರಡನೇ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಸುಶೀಲ್​ ಕುಮಾರ್​ ಅವರು ಫೈನಲ್​ ತಲುಪಿದ್ದರು.


ಇದಕ್ಕೂ ಮೊದಲು ಪ್ರಿಕ್ವಾರ್ಟರ್‌ಫೈನಲ್‌ನಲ್ಲಿ ಪೋಗಟ್‌ ಅವರು 3-2ರಿಂದ ಹಾಲಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಯುಯಿ ಸುಸಾಕಿ ಅವರಿಗೆ  ಆಘಾತ ನೀಡಿದರು.  ಈ ಅಚ್ಚರಿಯ ಫಲಿತಾಂಶದ ನಂತರ ವಿನೇಶಾ ಕ್ವಾರ್ಟರ್‌ಫೈನಲ್‌ನಲ್ಲಿ ಯುರೋಪಿನ ಮಾಜಿ ಚಾಂಪಿಯನ್‌, ಉಕ್ರೇನಿನ ಒಕ್ಸಾನಾ ಲಿವಾಚ್‌ ಅವರ ಸವಾಲನ್ನು 7-5 ರಿಂದ ಬದಿಗೊತ್ತಿ ಮೊದಲ ಬಾರಿ ಸೆಮಿಫೈನಲ್ ತಲುಪಿದರು.

 ಕಳೆದ ವರ್ಷ ಭಾರತ ಕುಸ್ತಿ ಸಂಸ್ಥೆಯ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಅವರ ವಿರುದ್ಧ ಮಹಿಳಾ ಕುಸ್ತಿಪಟುಗಳು ದೊಡ್ಡ ಮಟ್ಟದಲ್ಲಿ ಧರಣಿ ನಡೆಸಿದ್ದರು. ಆ ಹೋರಾಟದಲ್ಲಿ ವಿನೇಶ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments