ಬೆಂಗಳೂರು: ಗಟ್ಟಿಮೇಳ ಧಾರವಾಹಿಯಲ್ಲಿ ಆರತಿ ಪಾತ್ರ ಮಾಡುತ್ತಿರುವ ಅಶ್ವಿನಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರಾ? ಅವರ ಮದುವೆಯ ಫೋಟೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕನ್ನಡ ಮಾತ್ರವಲ್ಲದೇ ತೆಲುಗು ಧಾರವಾಹಿಯಲ್ಲೂ ನಟಿಸುತ್ತಿರುವ ಈ ನಟಿ ಕೆಲವು ದಿನಗಳ ಹಿಂದೆ ತಮ್ಮ ಇನ್ ಸ್ಟಾಗ್ರಾಂ ಪುಟ ಹ್ಯಾಕ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದರು. ಈಗ ಅವರ ಮದುವೆಯ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರು ನಿನ್ನೆ ಸದ್ದಿಲ್ಲದೇ ಮದುವೆಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದು ರಿಯಲ್ ಮದುವೆಯಾ? ರೀಲ್ ಮದುವೆಯಾ ಎಂಬ ಬಗ್ಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.