ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ!?

Webdunia
ಸೋಮವಾರ, 21 ಫೆಬ್ರವರಿ 2022 (10:06 IST)
ಶಿವಮೊಗ್ಗ : ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದೆ. ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. 

ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು.

ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಇದೀಗ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಬೆಂಗಳೂರು ಕ್ವಾರಿ ದುರಂತದ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ರು

ಮೇಡಂ ನನ್ನ ಸೀಟ್ ಹೆಂಡ್ತಿ ತಗೊಂಡಿದ್ದಾಳೆ.. ಗಗನಸಖಿ ಬಳಿ ಪತಿಯ ಕಂಪ್ಲೇಂಟ್, ವಿಮಾನವಿಡೀ ನಗುವೋ ನಗು Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀವದ ಮೇಲೆ ಆಸೆ ಇಲ್ವಾ... ರೈಲು ಹಳಿ ಮೇಲೆ ಅತ್ತಿತ್ತ ಓಡಾಡುತ್ತಿದ್ದವನ ರಕ್ಷಿಸಿದ ರೈಲ್ವೇ ಪೊಲೀಸ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments