Publish Date: Fri, 17 Dec 2021 (09:44 IST)
Updated Date: Fri, 17 Dec 2021 (09:46 IST)
ರಾಜ್ಯ ರಾಜಧಾನಿ ಬೆಂಗಳೂರಿನ ಜನರು ಚಳಿಯಿಂದ ಹೈರಾಣಾಗಿ ಹೋಗಿದ್ದಾರೆ. ಜೊತೆಗೆ ಹಾಗಾಗ ಮಳೆ ಕಾಟ.
ಮಳೆಯ ಜೊತೆಗೆ ಚಳಿಯು ಕೂಡ ಕಾಟ ಕೊಡಲು ಪ್ರಾರಂಭ ಮಾಡಿದೆ. ಇತ್ತ ಮನೆಯಲ್ಲಿ ರುಚಿರುಚಿಯಾದ ಅಡುಗೆ ಮಾಡಿಕೊಂಡು ತಿನ್ನೋಣ ಅಂದ್ರೆ ಬೆಲೆ ಏರಿಕೆಯ ಬಿಸಿ ಶಾಕ್ ನೀಡುತ್ತಿದೆ.
ಹೇಗಪ್ಪ ಇದರಿಂದ ರಕ್ಷಣೆ ಮಾಡಿಕೊಳ್ಳುವುದು ಅನ್ನುವ ಆತಂಕದಲ್ಲಿ ಇರುವ ರಾಜಧಾನಿ ಬೆಂಗಳೂರಿನ ಜನರಿಗೆ ಬೆಸ್ಕಾಂ ಏರಿಕೆ ಮಾಡಲು ಮುಂದಾಗಿ ಶಾಕ್ ನೀಡಿದೆ. ಇದು ಸಾಲದು ಅಂತ ಹಲವು ದಿನಗಳಿಂದ ನಿರಂತರವಾಗಿ ಕಾಮಗಾರಿಗಳ ಹೆಸರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಾ ಬಂದಿದೆ.
ಈಗ ಮತ್ತೆ ಡಿಸೆಂಬರ್ 17 ಹಾಗೂ 18ರಂದು ಮತ್ತೆ ವಿದ್ಯುತ್ ಸಂಪರ್ಕ ಕಡಿತ ಮಾಡಲು ಬೆಸ್ಕಾಂ ಮುಂದಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಯಾವ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಇರಲಿದೆ ಎಂಬ ಮಾಹಿತಿ ಇಲ್ಲಿದೆ.
Ramya kosira
Publish Date: Fri, 17 Dec 2021 (09:44 IST)
Updated Date: Fri, 17 Dec 2021 (09:46 IST)