ಬೆಂಗಳೂರು : ಮಾಂಡಸ್ ಚಂಡಮಾರುತದ ರೌದ್ರವತಾರ ಜೋರಾಗಿದೆ. ವಾತಾವರಣದ ಬದಲಾವಣೆಗೆ ರಾಜ್ಯದ ಜನ ಬೆಚ್ಚಿಬಿದ್ದಿದ್ದಾರೆ.
ಈಗ ಮತ್ತೆ ಮಳೆಯ ಮುನ್ಸೂಚನೆಯನ್ನ ಹವಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣ, ತುಂತುರು ಮಳೆ, ವಿಪರೀತ ಚಳಿಯ ವಾತಾವರಣ ಇದೆ. ಮಾಂಡಸ್ ಚಂಡಮಾರುತದ ಎಫೆಕ್ಟ್ ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಿಗೆ ತಟ್ಟಿದ್ದು, ಜನ ತತ್ತರಿಸಿ ಹೋಗಿದ್ದಾರೆ.
ವೀಕೆಂಡ್ ಮಸ್ತಿಗೆ ಬ್ರೇಕ್ ಹಾಕಿರೋದಲ್ಲದೇ ಇದರ ಕಾಟ ಮುಂದುವರಿಯುವ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ.