Select Your Language

Notifications

webdunia
webdunia
webdunia
webdunia

ಹಿಮಾಚಲದಲ್ಲಿ ಮಳೆ ಅವಾಂತರಕ್ಕೆ 71 ಬಲಿ !

ಹಿಮಾಚಲದಲ್ಲಿ ಮಳೆ ಅವಾಂತರಕ್ಕೆ 71 ಬಲಿ !
ಶಿಮ್ಲಾ , ಗುರುವಾರ, 17 ಆಗಸ್ಟ್ 2023 (08:20 IST)
ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳಲ್ಲಿ ತೊಡಗಿರುವುದರಿಂದ ಈ ಅಂದಾಜು ಹೆಚ್ಚುವ ಸಾಧ್ಯತೆಯಿದೆ ಎಂದು ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ. ಸುಮಾರು 2,500 ಜನರನ್ನು ಸುರಕ್ಷತ ಸ್ಥಳಗಳಿಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ. 

ರಾಜ್ಯ ವಿಪತ್ತು ನಿರ್ವಹಣೆಯ ಅಂಕಿ ಅಂಶದ ಪ್ರಕಾರ 1,762 ಮನೆಗಳು ಸಂಪೂರ್ಣ ಹಾನಿಯಾಗಿವೆ. 8,952 ಮನೆಗಳು ಭಾಗಶಃ ಹಾನಿಯಾಗಿವೆ. ಈ ವರ್ಷದ ಮುಂಗಾರು ಋತುವಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕಿಂಗ್ ಫಿಷರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆ !: ಸಾಕಷ್ಟು ಮೌಲ್ಯದ ಬಿಯರ್ ಜಪ್ತಿ