ಮುಂಬೈ : ಸಹೋದರನೊಬ್ಬ ತನ್ನ ಸಹೋದರಿ ಹೆಚ್ಚು ಹೊತ್ತು ಮೊಬೈಲ್ ನಲ್ಲಿ ಮಾತನಾಡುತ್ತಿರುವುದಕ್ಕೆ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಕಾಜಲ್ ಪಗರೆ (19 ವರ್ಷ) ಸಹೋದರನಿಂದ ಕೊಲೆಯಾದ ದುರ್ದೈವಿ. ಈಕೆ ಕೆಲವು ತಿಂಗಳುಗಳ ಹಿಂದೆ ಸ್ಮಾರ್ಟ್ ಫೋನ್ ವೊಂದನ್ನು ಖರೀದಿಸಿದ್ದಳು. ಆದರೆ ಆಕೆ ಅದರಲ್ಲಿ ತನ್ನ ಸ್ನೇಹಿತನ ಜೊತೆಗೆ ಮಾತನಾಡುತ್ತಾ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಳು. ಇದರಿಂದ ಬೇಸತ್ತ ಆಕೆಯ 16 ವರ್ಷದ ಸಹೋದರನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ದುಪ್ಪಟ್ಟದಿಂದ ಆಕೆಯ ಕತ್ತಿಗೆ ಬಿಗಿಯಾಗಿ ಸುತ್ತಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ನಂತರ ಪೊಲೀಸ್ ಠಾಣೆಗೆ ಬಂದು ತನ್ನ ಸಹೋದರಿ ಮನೆಯಲ್ಲಿ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದಾಳೆ ಅವಳ ಬಾಯಿಂದ ರಕ್ತ ಬರುತ್ತಿದೆ ಎಂದು ಸುಳ್ಳು ಹೇಳಿದ್ದಾನೆ. ಅನುಮಾನಗೊಂಡ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಆತನ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.