ಮುಂಬೈ : ಶೀಘ್ರದಲ್ಲೇ ಎಲ್ಲಾ ಬ್ಯಾಂಕ್ಗಳ ಎಟಿಎಂಗಳಲ್ಲಿ ಕಾರ್ಡ್ ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಾರಿಗೆ ತರಲು ಮುಂದಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಮುಂಬೈಯಲ್ಲಿ ಹಣಕಾಸು ನೀತಿ ಪರಾಮರ್ಶೆಯಲ್ಲಿ ವಿತ್ತೀಯ ನೀತಿಯ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮಾಹಿತಿ ಹಂಚಿಕೊಂಡ ಅವರು, ಪ್ರಸ್ತುತ ಎಟಿಎಂ ಮೂಲಕ ಕಾರ್ಡ್ ರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯವು ಕೆಲವು ಬ್ಯಾಂಕ್ಗಳಿಗೆ ಮಾತ್ರ ಸೀಮಿತವಾಗಿದೆ.
ಯುಪಿಐ ಬಳಸಿಕೊಂಡು ಎಲ್ಲಾ ಬ್ಯಾಂಕ್ಗಳು ಮತ್ತು ಎಟಿಎಂ ನೆಟ್ವರ್ಕ್ಗಳಲ್ಲಿ ಕಾರ್ಡ್ ರಹಿತವಾಗಿ ಹಣ ಹಿಂಪಡೆಯುವ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಚರ್ಚೆ ನಡೆಸಲಾಗಿದೆ.
ಇದರಿಂದಾಗಿ ಕಾರ್ಡ್ ರಹಿತವಾಗಿ ವ್ಯವಹಾರ ನಡೆಸುವ ಮೂಲಕ ಕಾರ್ಡ್ ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್ ಮುಂತಾದ ವಂಚನೆಗಳನ್ನು ಕಡಿಮೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ಬಳಕೆಯ ಮೂಲಕ ಗ್ರಾಹಕರ ದೃಢೀಕರಣವನ್ನು ಸಕ್ರಿಯಗೊಳಿಸಲು ಪ್ರಸ್ತಾಪಿಸಲಾಗಿದೆ.
ಆದರೆ ಅಂತಹ ವಹಿವಾಟುಗಳು ಎಟಿಎಂ ನೆಟ್ವರ್ಕ್ಗಳ ಮೂಲಕ ನಡೆಯುತ್ತದೆ ಎಂದು ಅಭಿವೃದ್ಧಿ ಮತ್ತು ನಿಯಂತ್ರಣ ನೀತಿಗಳ ಹೇಳಿಕೆ ತಿಳಿಸಿದೆ.