Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಳಗಾವಿ : ವಿಪಕ್ಷಗಳ ತೀವ್ರ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರಗೊಂಡಿದೆ.
ಬಿಜೆಪಿ ಮತಾಂತರ ತಡೆ ವಿಧೇಯಕ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತು. ಬಳಿಕ ಧ್ವನಿ ಮತದ ಮೂಲಕ ಬಿಲ್ ಅಂಗೀಕಾರ ಪಡಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧೇಯಕ ಪಾಸ್ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು.
ಆದರೆ ಕಾಂಗ್ರೆಸ್ ಸದನದಲ್ಲಿ ಗದ್ದಲ ನಡೆಸಿತು. ಈ ನಡುವೆಯೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಅಂಗೀಕಾರಗೊಂಡಿತು.