Publish Date: Sun, 26 Jun 2022 (08:15 IST)
Updated Date: Sat, 25 Jun 2022 (23:17 IST)
ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ.