ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ, ಹಿರಿಯ ನಟಿ ಜಯಮಾಲಾ ಅವರು ತಮ್ಮ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ‘ಸೆಕ್ಸ್ ವರ್ಕರ್ಸ್’ ಪದಕ್ಕೆ ಪರ್ಯಾಯವಾಗಿ ಇನ್ನು ಮುಂದೆ ‘ದಮನಿತ ಮಹಿಳೆಯರು’ ಎಂದು ಕರೆಯುವಂತೆ ಸೂಚನೆ ನೀಡಿದ್ದಾರೆ.
ಸಚಿವೆ ಜಯಮಾಲಾ ಅವರು ಸಚಿವರಾದ ನಂತರ ಪ್ರಥಮ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿಗಳ ಸಭೆ ಕರೆದು ಮಾತನಾಡಿದ ಅವರು,’ ಮುಂದಿನ ಐದು ವರ್ಷಗಳಲ್ಲಿ ಮಹಿಳೆಯರ ಅಭ್ಯುದಯಕ್ಕೆ ಯಾವ ಯೋಜನೆಗಳು ಇದ್ದರೆ ಉತ್ತಮ ಎಂಬುದರ ಕುರಿತು ಶೀಘ್ರವೇ ಮಾಹಿತಿ ನೀಡಬೇಕು. ಇಲಾಖೆಯಲ್ಲಿ ಶೋಷಿತ ಮಹಿಳೆಯರು, ಮಕ್ಕಳ ಕುರಿತು ನಿರ್ಲಕ್ಷ್ಯ ವಹಿಸಬಾರದು. ಅಗತ್ಯ ಸಂದರ್ಭದಲ್ಲಿ ಎಲ್ಲ ರೀತಿಯ ನೆರವು ನೀಡಲು ಅಧಿಕಾರಿಗಳು ಸಿದ್ಧರಿರಬೇಕು ಎಂದು ಸೂಚನೆ ನೀಡಿದರು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಚಕ್ರವರ್ತಿ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ದೀಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಸೇರಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ