ನವದೆಹಲಿ : ಅಮರನಾಥ ಯಾತ್ರೆ ಪುನಾರಂಭಿಸಲಾಗಿದೆ. ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದು, ಇದೀಗ ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಯಾತ್ರೆ ಮತ್ತೆ ಆರಂಭಿಸಲಾಗಿದೆ.
ಜಮ್ಮು ಮಾರ್ಗವಾಗಿ ಬರುವ ಯಾತ್ರಾರ್ಥಿಗಳಿಗೆ ಬೇಸ್ ಕ್ಯಾಂಪ್ಗೆ ತೆರಳಲು ಅನುಮತಿ ನೀಡಲಾಗಿದೆ. ಪೆಹಲ್ಗಾಮ್ ಬೇಸ್ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ.
ಮುಂಜಾನೆ 5 ಗಂಟೆಗೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರಾರ್ಥಿಗಳು ಹೊರಟಿದ್ದಾರೆ. ಬಾಲ್ಟಾಲ್ ಮತ್ತು ನುನ್ವಾನ್ ನಿಂದ ಹೆಲಿಕಾಪ್ಟರ್ ಹಾರಾಟ ಆರಂಭವಾಗಿದೆ.