ಬೆಂಗಳೂರು : ಸ್ಯಾಂಡಲ್ವುಡ್ ನಟ ಚೇತನ್ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಅವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಬಸವನಗುಡಿ ಠಾಣೆ ಪೊಲೀಸರಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.
ಐಪಿಸಿ ಸೆಕ್ಷನ್ 153(A) ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಕೆಗೆ ಅನುಮತಿ ಕೋರಿ ಪೊಲೀಸರು ಪತ್ರ ಬರೆದಿದ್ದಾರೆ. ಏನಿದು ಪ್ರಕರಣ? ಚಾರ್ಜ್ಶೀಟ್ಗೆ ಸರ್ಕಾರದ ಅನುಮತಿ ಏಕೆ ಬೇಕು? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. 2021ರ ಜೂನ್ 10ರಂದು ನಟ ಚೇತನ್ ಮೇಲೆ 2 ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣಗಳು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದವು. ಈ ವೇಳೆ IPC 153(A) ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು. IPC 153(A) ಅಡಿಯಲ್ಲಿ ಕೇಸ್ ದಾಖಲಾದರೆ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯವಾಗಿದೆ.