ಬೆಂಗಳೂರು : ಕೇಂದ್ರ ಸರ್ಕಾರ 14 ಕೆಜಿ LPG ಸಿಲಿಂಡರ್ಗೆ 200 ರೂ. ಸಬ್ಸಿಡಿ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ.
19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 158 ರೂ. ಇಳಿಕೆ ಕಂಡಿದೆ. ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ ಕಂಡಿದ್ದು, 1,767.50 ರೂ. ಇದ್ದ ಸಿಲಿಂಡರ್ ಬೆಲೆ ಇಂದು 1,609.50 ರೂ. ಆಗಿದೆ.
ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್ಪಿಜಿ ಸಿಲಿಂಡರ್ ದರವನ್ನ ಹೆಚ್ಚಿಸಿದ್ದವು. ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.