Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹಾವೇರಿ : ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ.
ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಕೋಡಿ ಮಠದ ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಣೇಬೆನ್ನೂರು ನಗರದ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ.
ಕೊರೊನಾ ರೂಪಾಂತರಿ ಹೆಚ್ಚಾಗುವ ಎಲ್ಲಾ ಲಕ್ಷಣಗಳಿವೆ. ದೇಶದಲ್ಲಿ ಸಂಶಯ, ಅಸಹನೆ, ದ್ವೇಷ ಹಾಗೂ ರಾಜಕೀಯ ಕಲಹಗಳು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಮಳೆ ಕೂಡ ಅಧಿಕವಾಗಿ ಸುರಿಯುವ ಲಕ್ಷಣವಿದೆ ಎಂದು ಕೋಡಿ ಮಠದ ಶ್ರೀಗಳು ತಿಳಿಸಿದ್ದಾರೆ.