ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಗೆ ಹೋಲಿಸಿದ್ದಾರೆ.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 43 ವರ್ಷವಾದ ಹಿನ್ನಲೆಯಲ್ಲಿ ಅವರು ಈ ಪರಿಸ್ಥಿತಿಗೆ ಕಾರಣವಾಗಿದ್ದ ಇಂದಿರಾ ಗಾಂಧಿಯನ್ನು ಸರ್ವಾಧಿಕಾರಿ ಎಂದು ಜರೆದಿದ್ದಾರೆ.
1933 ರಲ್ಲಿ ಜರ್ಮನಿಯಲ್ಲಿ ಹಿಟ್ಲರ್ ನಡೆಸಿದ ಘೋರ ಸರಣಿ ಹತ್ಯಾಕಾಂಡದಿಂದ ಸ್ಪೂರ್ತಿ ಪಡೆದ ಇಂದಿರಾ ಭಾರತದಲ್ಲೂ 1975 ರಲ್ಲಿ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವವನ್ನು ಸರ್ವಾಧಿಕಾರವಾಗಿ ಪರಿವರ್ತಿಸಿದರು ಎಂದು ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.
ಇನ್ನೊಂದೆಡೆ ಜೇಟ್ಲಿ ಲೇಖನವನ್ನು ಓದುವಂತೆ ಪ್ರಧಾನಿ ಮೋದಿ ಕೂಡಾ ತಮ್ಮ ಟ್ವಿಟರ್ ಪೇಜ್ ನಲ್ಲಿ ಲಿಂಕ್ ಸಮೇತ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.