Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ?

ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ?
ಬೆಂಗಳೂರು , ಗುರುವಾರ, 27 ಜನವರಿ 2022 (09:56 IST)
ಬೆಂಗಳೂರು : ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನದಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದು ನಮ್ಮ ಆಧ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ.

ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್ಲೈನ್ ತರಗತಿ ಪ್ರಾರಂಭ ಆಗೋವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾಥಮಿಕ ಹಂತದಲ್ಲೇ ರೋಗವನ್ನು ಗುರುತಿಸಿ