Publish Date: Sun, 14 May 2023 (10:03 IST)
Updated Date: Sun, 14 May 2023 (11:05 IST)
ಬೆಂಗಳೂರು : ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.
ಇಂದು ರಾತ್ರಿ ರಾಜ ಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದರು.
ಬಯಸದೇ ಬಂದ ಭಾಗ್ಯದಂತೆ ಮುಖ್ಯಮಂತ್ರಿ ಪದವಿ ಅಲಂಕರಿಸಿದ್ದ ಬೊಮ್ಮಾಯಿ ಇಂದು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ 65, ಕಾಂಗ್ರೆಸ್ 136, ಜೆಡಿಎಸ್ 19, ಇತರರು 04 ಸ್ಥಾನಗಳನ್ನು ಗೆದ್ದಿದ್ದಾರೆ.