Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 108 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ನಿನ್ನೆ 10,566 ಟೆಸ್ಟಿಂಗ್ ನಡೆಸಲಾಗಿದ್ದು, 1,780 ಸಕ್ರೀಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ. ಈ ಬೆನ್ನಲ್ಲೇ ಕೊವಿಡ್ ನಿಯಂತ್ರಣಕ್ಕೆ ತರಲು ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನೇಮಿಸಿಕೊಳ್ಳಲು ಮುಂದಾಗಿದೆ.
ನಗರದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲು ಪಾಲಿಕೆಯಿಂದ 500 ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದೆ.
ಕಳೆದ ಬಾರಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದ ಸಿಬ್ಬಂದಿಯನ್ನು ಮಾರ್ಚ್ನಲ್ಲಿ ಕೈಬಿಡಲಾಗಿತ್ತು. ಇದೀಗ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಕರ್ತವ್ಯ ನಿರ್ವಹಣೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಹಾಗಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಿದೆ.