ನವದೆಹಲಿ : ಮಹಿಳೆಯರಿಗೆ ಮೋಸ ಮಾಡುವ ಹಾಗೂ ಕಿರುಕುಳ ನೀಡುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಹೊಸ ಪೋರ್ಟಲ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ.
ಎನ್‌ಆರ್‌ಐ ಮದುವೆ ಮತ್ತು ಮಹಿಳಾ ಹಾಗೂ ಮಕ್ಕಳ ಕಳ್ಳಸಾಗಣೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು,’ ಕಿರುಕುಳ ನೀಡುವ ಮತ್ತು ಮದುವೆಯಾದ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಗಂಡನ ವಿರುದ್ಧ ದೂರು ನೀಡಲು ಅನುಕೂಲವಾಗುವಂತೆ ಪೋರ್ಟಲ್ ಒಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂಬುದಾಗಿ ಮಾಹಿತಿ ನೀಡಿದ್ದಾರೆ.
ಹಾಗೇ ತೊಂದರೆಗೊಳಗಾದ ಮಹಿಳೆಯರು ಪೋರ್ಟಲ್‌ನಲ್ಲಿ ದೂರು ನೀಡಬಹುದು. ದೂರಿನ ಮೇರೆಗೆ ಅನಂತರ ಕ್ರಮ ಕೈಗೊಂಡು , ಆರೋಪ ಸಾಬೀತಾದರೆ ಅಪರಾಧಿಯಾಗಿ ಶಿಕ್ಷೆ ನೀಡಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ