Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸ್ವಚ್ಛನಗರಿ ರ್ಯಾಂಕಿಂಗ್ ಪಟ್ಟಿಯಲ್ಲಿ ಕೆಳಗಿಳಿದ ಬೆಂಗಳೂರು!

ಸ್ವಚ್ಛನಗರಿ ರ್ಯಾಂಕಿಂಗ್ ಪಟ್ಟಿಯಲ್ಲಿ ಕೆಳಗಿಳಿದ ಬೆಂಗಳೂರು!
ಬೆಂಗಳೂರು , ಮಂಗಳವಾರ, 4 ಅಕ್ಟೋಬರ್ 2022 (13:02 IST)
ಬೆಂಗಳೂರು : ಬ್ರ್ಯಾಂಡ್ ಬೆಂಗಳೂರಿಗೆ ಮತ್ತೆ ಧಕ್ಕೆಯಾಗಿದೆ. ಸ್ವಚ್ಛ ಸರ್ವೇಕ್ಷಣ್ ರ್ಯಾಂಕಿಂಗ್ ಪಟ್ಟಿಯಲ್ಲಿ ಬೆಂಗಳೂರು ಕುಸಿದಿದೆ.

ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕಳೆದ ವರ್ಷ 28ನೇ ಸ್ಥಾನದಲ್ಲಿ ಬೆಂಗಳೂರು ಈ ಬಾರಿ 43ನೇ ಸ್ಥಾನಕ್ಕೆ ಕುಸಿದಿದೆ.

10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ 45 ನಗರಗಳನ್ನು ಅಧ್ಯಯನ ನಡೆಸಿ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶದ ಇಂದೋರ್ ಸತತ 6ನೇ ಬಾರಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿಯುತ್ತಿದೆ. ಚೆನ್ನೈ ಮತ್ತು ಮಧುರೈ ಕೊನೆಯ ಸ್ಥಾನಗಳನ್ನು ಪಡೆದುಕೊಂಡಿದೆ. 

ನಗರದ ಸ್ವಚ್ಛತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆಯಿಂದ ಕೈಗೊಂಡ ಕ್ರಮಗಳು, ಸಾರ್ವಜನಿಕ ಸ್ಥಳಗಳಲ್ಲಿನ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಕ್ಕೆ ಕೈಗೊಂಡ ಕ್ರಮ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ರ್ಯಾಂಕ್ ನೀಡಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಫ್ಐಯಿಂದ ಎಚ್ಚರಿಕೆಯ ಬರಹ!