ಜಮ್ಮು ಕಾಶ್ಮೀರ: ಕಣಿವೆ ರಾಜ್ಯದಲ್ಲಿ ಪಿಡಿಪಿ ಜತೆಗಿನ ಮೈತ್ರಿಗೆ ಬಿಜೆಪಿ ಗುಡ್ ಬೈ ಹೇಳಿದ್ದು, ಸಮ್ಮಿಶ್ರ ಸರ್ಕಾರ ಮುರಿದು ಬಿದ್ದಿದೆ.
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರ ಎನ್ ಎನ್ ವೋಹ್ರಾ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆಗೆ ಅವಕಾಶ ಕೋರಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಗೆ ಪತ್ರ ಬರೆದಿದ್ದಾರೆ.
ಕೇಂದ್ರ ನಾಯಕರಾದಿ ನರೇಂದ್ರ ಮೋದಿ, ಅಮಿತ್ ಶಾ ಜತೆಗೆ ಚರ್ಚಿಸಿ ಬಿಜೆಪಿ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂತೆಗೆದುಕೊಳ್ಳಲು ತೀರ್ಮಾನಿಸಿತು. ಇದೀಗ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಪಕ್ಷಗಳೂ ಪಿಡಿಪಿ ಜತೆ ಕೈಜೋಡಿಸಲು ಇಷ್ಟವಿಲ್ಲ ಎಂಬುದಾಗಿ ಹೇಳಿದೆ. ಹೀಗಾಗಿ ಇನ್ನೊಂದು ಚುನಾವಣೆವರೆಗೆ ರಾಜ್ಯಪಾಲರ ಆಳ್ವಿಕೆ ಅನಿವಾರ್ಯವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.