ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಸದನದಲ್ಲಿ ನಡೆಯಲಿದ್ದು, ಇದಕ್ಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ.
ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಸದನ ಕಲಾಪಕ್ಕೆ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ. ಈ ಮೂಲಕ ಹೊಸ ದಾಖಲೆಯೊಂದನ್ನು ಮಾಡಲಿದೆ.
ಇದುವರೆಗೆ ರಾಜ್ಯದ ಇತಿಹಾಸದಲ್ಲಿ ಅತೀ ದೊಡ್ಡ ಪಕ್ಷ ವಿಶ್ವಾಸ ಮತ ಪ್ರಕ್ರಿಯೆ ಸಂದರ್ಭದಲ್ಲಿ ಸದನಕ್ಕೆ ಬಹಿಷ್ಕಾರ ಹಾಕಿದ ಉದಾಹರಣೆ ಇಲ್ಲ. ಆ ಪ್ರಥಮ ಇದೀಗ ಬಿಜೆಪಿ ಪಾಲಾಗುತ್ತಿದೆ. ಹಾಗಿದ್ದರೂ ಸದನದಲ್ಲಿ ಪಾಲ್ಗೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಇಂದು ಬೆಳಿಗ್ಗೆ ಸಭೆ ನಡೆಸಿ ಬಿಜೆಪಿ ನಾಯಕರು ಮತ್ತೊಮ್ಮೆ ತೀರ್ಮಾನ ಕೈಗೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.