Publish Date: Wed, 03 Oct 2018 (08:46 IST)
Updated Date: Wed, 03 Oct 2018 (08:47 IST)
ಬೆಂಗಳೂರು: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಕಾಳಜಿ ವಹಿಸಿ ಮಾತನಾಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜ್ಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ರೈತರ ಮೇಲೆ ಕರುಣೆ ತೋರುವ ಮೊದಲು ರಾಹುಲ್ ಜೀ ಮೊದಲು ನಿಮ್ಮ ಮತ್ತು ಜೆಡಿಎಸ್ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದ ರೈತರ ಬಗ್ಗೆ ಕಾಳಜಿ ವಹಿಸಿ. ಇಲ್ಲಿನ ರೈತರ ಸಮಸ್ಯೆ ಏನೆಂದು ಮೊದಲು ತಿಳಿದುಕೊಳ್ಳಿ. ನಿಮ್ಮ ಪಕ್ಷ ಅಧಿಕಾರದಲ್ಲಿರುವಾಗಲೇ ಕಳೆದ ಆರು ತಿಂಗಳಲ್ಲಿ 285 ರೈತರು ಇಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಬಿಎಸ್ ವೈ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಪ್ರತಿಯಾಗಿ ಬಿಎಸ್ ವೈ ಈ ರೀತಿ ಟಾಂಗ್ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.