ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ವಿಧಿವಶರಾದ ಬೆನ್ನಲ್ಲೇ ಅವರ ಜತೆಗಿನ ಬಾಂಧವ್ಯವೊಂದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮೆಲುಕು ಹಾಕಿದ್ದಾರೆ.
ಕರುಣಾನಿಧಿ ಸಾವಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದ ಯಡಿಯೂರಪ್ಪ ಅವರ ಜತೆ ತಾವು ಮಾಡಿದ ಕೆಲಸವೊಂದನ್ನು ಸ್ಮರಿಸಿಕೊಂಡಿದ್ದಾರೆ.
ತಮಿಳಿನ ಶ್ರೇಷ್ಠ ಕವಿ ತಿರುವಳ್ಳುವರ್ ಪ್ರತಿಮೆಯನ್ನು ಕರ್ನಾಟಕದಲ್ಲಿ ಮತ್ತು ತಮಿಳುನಾಡಿನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸುವ ಮೂಲಕ ತಾವಿಬ್ಬರೂ ಉಭಯ ರಾಜ್ಯಗಳ ನಡುವೆ ಹೊಸದೊಂದು ಬಾಂಧವ್ಯಕ್ಕೆ ನಾಂದಿ ಹಾಡಿದ್ದೆವು. ಎರಡೂ ರಾಜ್ಯಗಳ ನಡುವೆ ಸೌಹಾರ್ದಯುತ ವಾತಾವರಣವಿರಬೇಕೆಂದು ಬಯಸಿದ್ದ ರಾಜಕಾರಣಿಯಾಗಿದ್ದ ಕರುಣಾನಿಧಿ ಎಂದು ಯಡಿಯೂರಪ್ಪ ಸ್ಮರಿಸಿಕೊಂಡಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಪ್ರತಿಮೆ ಸ್ಥಾಪನೆಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.