ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಒಂದು ಗಂಟೆ ಬಾಕಿಯಿರುವಂತೆ ತಮ್ಮ ಪಕ್ಷಕ್ಕೆ ಬಹುಮತ ಸಾಧಿಸಲು ಸಾಧ್ಯವಾಗದೆಂದು ಸಿಎಂ ಯಡಿಯೂರಪ್ಪ ರಾಜೀನಾಮೆ ಕೊಡುತ್ತಾರಾ?
ಹಾಗೊಂದು ಸುದ್ದಿ ಓಡಾಡುತ್ತಿದೆ. ಸದ್ಯಕ್ಕೆ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಕುಳಿತಿರುವ ಯಡಿಯೂರಪ್ಪ ಹೈಕಮಾಂಡ್ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಷ್ಟೇ ಅಲ್ಲದೆ, ಈಗಾಗಲೇ ವಿಶ್ವಾಸ ಮತ ಯಾಚನೆ ಬಳಿಕ ಭಾಷಣ ಮಾಡಲು ಸುದೀರ್ಘ ಭಾಷಣ ಪ್ರತಿಯನ್ನು ಸಿದ್ಧಗೊಳಿಸಿದ್ದಾರೆ ಎನ್ನಲಾಗಿದೆ. ಹಾಗಿದ್ದರೂ ಕೊನೇ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.