ನವದೆಹಲಿ : ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ದೇಶೀಯ ಸಿಮೆಂಟ್ ಕಂಪನಿಗಳು ಶೀಘ್ರವೇ ಪ್ರತಿ ಚೀಲ ಸಿಮೆಂಟ್ ಬೆಲೆಯನ್ನು 25-50 ರು.ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹಣಕಾಸು ಸೇವಾ ಸಂಸ್ಥೆ ಕ್ರಿಸಿಲ್ ಹೇಳಿದೆ.
ಕೆಲ ದಿನಗಳ ಹಿಂದಷ್ಟೇ ಸಗಟು ಪೂರೈಕೆ ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಇನ್ನು ಕಲ್ಲಿದ್ದಲು ಪೂರೈಕೆ ಕುಸಿತವಾಗಿ, ದರ ಗಗನಕ್ಕೇರಿದೆ. ಮತ್ತೊಂದೆಡೆ ರಷ್ಯಾ- ಉಕ್ರೇನ್ ಯುದ್ಧದಿಂದ ಸೃಷ್ಟಿಯಾಗಿರುವ ಸಮಸ್ಯೆಗಳು ಸಿಮೆಂಟ್ ವಲಯದ ಮೇಲೂ ಪರಿಣಾಮ ಬೀರಿವೆ.
ಸಿಮೆಂಟ್ ದರದಲ್ಲಿ ಸಾಗಣೆ ವೆಚ್ಚವೇ ಶೇ.50ರಷ್ಟುಇರುವ ಕಾರಣ, ಡೀಸೆಲ್ ದರ ಏರಿಕೆ ಸಹಜವಾಗಿಯೇ ಪರಿಣಾಮ ಬೀರಲಿದೆ. ಹೀಗಾಗಿ ಕಂಪನಿಗಳು ಪ್ರತಿ ಚೀಲದ ಬೆಲೆಯಲ್ಲಿ 25-50 ರು.ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಕ್ರಿಸಿಲ್ ತನ್ನ ವರದಿಯಲ್ಲಿ ಹೇಳಿದೆ.
ಕಳೆದ 12 ತಿಂಗಳಲ್ಲಿ ಹಲವು ಬಾರಿ ಸಿಮೆಂಟ್ ದರ ಏರಿಕೆಯಾಗಿದ್ದು, ಈಗಾಗಲೇ ಪ್ರತಿ ಚೀಲದ ಬೆಲೆ 360-420 ರು.ವರೆಗೂ ತಲುಪಿದೆ.