Webdunia - Bharat's app for daily news and videos

Install App

ಮೇ 20, 21 ರಂದು ಸಿಇಟಿ ಪರೀಕ್ಷೆ

Webdunia
ಶುಕ್ರವಾರ, 19 ಮೇ 2023 (09:59 IST)
ಬೆಂಗಳೂರು : ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ.

ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 592 ಅಬ್ಸವರ್ಸ್ಗಳು, 1,184 ವಿಶೇಷ ಸ್ಕ್ವಾಡ್ ಸಿಬ್ಬಂದಿ, 592 ಕಸ್ಟೋಡಿಯನ್, 10,900 ಇನ್ವಿಜಿಲೇಟರ್ಗಳು ಸೇರಿ 23,050 ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದಾರೆ.

ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments