Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು , ಶನಿವಾರ, 16 ಜುಲೈ 2022 (06:59 IST)
ಬೆಂಗಳೂರು : ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಶುಕ್ರವಾರ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶನಿವಾರದಿಂದ 4 ದಿನಗಳವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಸಮುದ್ರ ತೀರದಲ್ಲಿ ಬಿರುಗಾಳಿ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿ ಗಂಟೆಗೆ 45-55 ಕಿ.ಮೀ ವೇಗದಲ್ಲಿ, ಕೆಲವೊಮ್ಮೆ 65 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಹವಾಮಾನ ಇಲಾಖೆಯ ಮಳೆ ವರದಿಯ ಪ್ರಕಾರ ಕರಾವಳಿಯ 9 ಕಡೆ ಭಾರೀ ಮಳೆ ದಾಖಲಾಗಿದೆ. ಉತ್ತರ ಒಳನಾಡಿನ 2 ಕಡೆ ಭಾರೀ ಮಳೆ ವರದಿಯಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ನೋಟಾದಲ್ಲಿ 10 ಸೆ.ಮೀ, ಬೆಳಗಾವಿ ಜಿಲ್ಲೆಯ ಗುಂಜೆಯಲ್ಲಿ 7 ಸೆ.ಮೀ ಮಳೆ ದಾಖಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಅರ್ಜಿ