Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

1 ರಿಂದ 5ನೇ ತರಗತಿಗಳ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ!

1 ರಿಂದ 5ನೇ ತರಗತಿಗಳ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ!
ಬೆಂಗಳೂರು , ಶನಿವಾರ, 4 ಸೆಪ್ಟಂಬರ್ 2021 (13:46 IST)
ಬೆಂಗಳೂರು, ಸೆ. 04: ಒಂದರಿಂದ ಐದನೇ ತರಗತಿಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಸಧ್ಯ 6,7,8 ನೇ ತರಗತಿಗನ್ನು ಆರಂಭ ಮಾಡುತ್ತಿದ್ದೇವೆ. ಅದರ ಫಲಿತಾಂಶ ನೋಡಿಕೊಂಡು 1 ರಿಂದ 5ನೇ ತರಗತಿಗಳ ಆರಂಭ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸದ್ಯ 1ರಿಂದ 5 ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸುವ ಬಗ್ಗೆ ಚರ್ಚೆ ಮಾಡಿಲ್ಲ. ಸೆ. 06 ರಿಂದ ಆರಂಬವಾಗುವ ತರಗತಿಗಳನ್ನು ಗಮನಿಸಿ ಮುಂದಿನ ತೀರ್ಮಾನ ತಗೆದು ಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಗೆ ಎನ್.ಡಿ.ಆರ್.ಎಫ್ ಅಡಿಯಲ್ಲಿ ರಾಜ್ಯಕ್ಕೆ ಅಗತ್ಯ ನೆರವು ದೊರಕಲಿದೆ ಎಂಬ ವಿಶ್ವಾಸವನ್ನು ಸಿಎಂ ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ.
ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದಿನ ಸಚಿವ ಸಂಪುಟದ ನಂತರ ಕೇಂದ್ರ ಅಧ್ಯಯನ ತಂಡ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಆಗಮಿಸಿದೆ. ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಪೂರ್ವಭಾವಿ ಚರ್ಚೆ ನಡೆಸಲಾಗುವುದು. ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಯ ನಂತರ ಮತ್ತೊಮ್ಮೆ ಅಂತಿಮ ಸಭೆ ನಡೆಸಲಾಗುವುದು. ವರದಿಗಳನ್ನು ನೀಡಿ, ಅವರಿಗೆ ಮನವರಿಕೆ ಮಾಡಿಕೊಡಲಾಗುವುದು. ತಂಡದೊಂದಿಗೆ ಅಧಿಕಾರಿಗಳು ಪ್ರವಾಸ ಮಾಡಲಿದ್ದು ಎಲ್ಲಿ ಅತಿ ಹೆಚ್ಚು ಹಾನಿಯಾಗಿದೆ ಅಲ್ಲಿ ಭೇಟಿ ನೀಡಿ ವರದಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಸಭೆಗಳಲ್ಲಿ ಹೆಚ್ಚಿನ ಜನರ ಸೇರುತ್ತಿರುವುದು, ಕೇಂದ್ರ ಸಚಿವರು ರ್ಯಾಲಿಗಳನ್ನು ಮಾಡುತ್ತಿರುವುದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, "ಎಲ್ಲವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ. ರ್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುತ್ತೇವೆ" ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಎನ್ ಡಿ ಆರ್ ಎಫ್ ನಿಂದ ಅಗತ್ಯ ನೆರವು : ಸಿಎಂ