ಉತ್ತರಾಖಂಡ್ : ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ವರ್ಗಾವಣೆ ಬೇಕೆಂದು ಪ್ರತಿಭಟಿಸಿದ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಿ, ಬಂಧಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸಿಎಂ ತ್ರಿವೇಂದ್ರ ಗುರುವಾರ 'ಜನತಾ ದರ್ಬಾರ್' ಹಮ್ಮಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಉತ್ತರಾ ಬಹುಗುಣ ಎಂಬುವವರು ಕಳೆದ ೨೫ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದು ಅಲ್ಲಿಂದ ಬೇರೆಡೆಗೆ ವರ್ಗಾಯಿಸುವಂತೆ ಕೇಳಿಕೊಂಡರು. ಸಿಎಂ ಅದನ್ನು ನಿರಾಕರಿಸಿದಾಗ ಆ ಶಿಕ್ಷಕಿ ಅವ್ಯಾಚ ಶಬ್ದಗಳಿಂದ ಸಿಎಂ ಅವರನ್ನು ನಿಂದಿಸಿ ಪ್ರತಿಭಟಿಸಿದ್ದಾರೆ. ಇದರಿಂದ ಕೋಪಗೊಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಆಕೆಯನ್ನು ತಕ್ಷಣವೇ ಅಮಾನತುಗೊಳಿಸಿ, ಬಂಧಿಸುವಂತೆ ಸೂಚಿಸಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ಭಾರಿ ಸದ್ದು ಮಾಡುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ