Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದಂತೆ ಒಂದೊಂದೆ ರಾಜ್ಯಗಳು ಶಾಲೆಗಳನ್ನು ಪುನರಾರಂಭ ಮಾಡುತ್ತಿವೆ.
ಹಿಮಾಚಲ ಪ್ರದೇಶ ರಾಜ್ಯವು ಸಹ ಇಂದಿನಿಂದ ಶಾಲೆಗಳನ್ನು ಆರಂಭಿಸಿದೆ. 3 ರಿಂದ 7ನೇ ಕ್ಲಾಸ್ಗಳಿಗೆ ಇಂದಿನಿಂದ ತರಗತಿಗಳು ಆರಂಭವಾಗಿವೆ. ಇನ್ನು 1 ಮತ್ತು 2ನೇ ತರಗತಿಗಳಿಗೆ ನವೆಂಬರ್ 15ರಿಂದ ತರಗತಿಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ 7 ನೇ ತರಗತಿ ಮೇಲ್ಪಟ್ಟ ತರಗತಿಗಳಿಗೆ ಕ್ಲಾಸ್ ನಡೆಸಲಾಗುತ್ತಿದೆ. ಸದ್ಯ ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡಿಕೊಂಡು ತರಗತಿಗಳನ್ನು ನಡೆಸಬೇಕು ಅಂತಾ ರಾಜ್ಯ ಸರ್ಕಾರ ಎಲ್ಲಾ ಶಾಲೆಗಳಿಗೆ ಎಚ್ಚರಿಕೆ ನೀಡಿದೆ.