ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಜನ ಸ್ಪಂದನ ವೆಬ್ ಪೋರ್ಟಲ್ ಅನ್ನು ಉದ್ಘಾಟನೆ ಮಾಡಿದ್ದಾರೆ.
1902 ಸಹಾಯವಾಣಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಸಹಾಯವಾಣಿಗೆ ಮೊದಲ ಕರೆ ಮಾಡಿದ್ದಾರೆ. ಜತೆಗೆ ಸಹಾಯವಾಣಿ ಸಿಬ್ಬಂದಿ ಜತೆ ಫೋನ್‌ನಲ್ಲಿ ವಿವರ ಪಡೆದಿದ್ದಾರೆ. ಗಿಡಗಳಿಗೆ ನೀರು ಹಾಕಿ ವಿಧಾನಸೌಧದಲ್ಲಿ ಜನ ಸ್ಪಂದನ ಲೋಕಾರ್ಪಣೆ ಮಾಡಿದ್ದಾರೆ. ಸಚಿವ ಬಿ.ಸಿ.ನಾಗೇಶ್, ಡಾ.ಅಶ್ವತ್ಥ್ ನಾರಾಯಣ, ಸುರೇಶ್ ಕುಮಾರ್, ರಿಜ್ವಾನ್ ಅರ್ಷದ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಲ್ಲೇಶ್ವರಂ ಕ್ಷೇತ್ರದ ಎರಡು ರಸ್ತೆಗಳಲ್ಲಿ ಪ್ರಾಯೋಗಿಕ ಜನ ಸೇವಕ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಸ್ಕೂಟರ್ ಚಲಾಯಿಸಿಕೊಂಡು ಮನೆ ಮನೆಗೆ ಯೋಜನೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಈ ವೇಳೆ ಸಿಎಂಗೆ ರಸ್ತೆಯುದ್ದಕ್ಕೂ ಹೂ ಸುರಿಮಳೆ ಮಾಡಲಾಗಿದೆ. ಆಧಾರ್ ಕಾರ್ಡ್, ಆರೋಗ್ಯ ಕಾರ್ಡ್, ಉದ್ಯೋಗ ಕಾರ್ಡ್, ವಿಧವಾ ವೇತನ, ಪಹಣಿ, ಪಿಂಚಣಿಯನ್ನು ಆ ಮೂಲಕ ಜನರಿಗೆ ತಲುಪಿಸಲು ಸಿಎಂ ಮುಂದಾಗಿದ್ದಾರೆ.